ಗೆಳೆಯರ ಬಳಗ (ರಿ.) ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ, ಕಾರಂತ ಪುರಸ್ಕಾರ - 2026 ಪ್ರಶಸ್ತಿಗೆ ಈ ನಾಡಿನ ಹಿರಿಯರಾದ ಕಾರಂತರ ಆತ್ಮೀಯ ಓಡನಾಡಿ ಶ್ರೀ ರಾಮ ಮೊಗವೀರ ಕೋಟ ಆಯ್ಕೆಯಾಗಿದ್ದಾರೆ. ಈ ಹಿಂದೆ ಶ್ರೀಮತಿ ಮಾಲಿನಿ ಮಲ್ಯ, ಶ್ರೀ ಎಸ್. ನಾರಾಯಣ ರಾವ್,ಪೇತ್ರಿ ಮಾಧವ ನಾಯಕ್, ಶ್ರೀ ಶ್ರೀನಿವಾಸ ಸಾಸ್ತಾನ, ಶ್ರೀ ಹಿರಿಯಡ್ಕ ಗೋಪಾಲರಾವ್, ಶ್ರೀ ಎಚ್. ಇಬ್ರಾಹಿಂ ಸಾಹೇಬ್, ಶ್ರೀ ಪಾಂಡೇಶ್ವರ ಚಂದ್ರಶೇಖರ ಚಡಗ,ಶ್ರೀ ಬನ್ನಂಜೆ ಸಂಜೀವ ಸುವರ್ಣ,ಶ್ರೀಮತಿ ವೈದೇಹಿ, ಶ್ರೀ ಡಾ ನಾ ಮೊಗಸಾಲೆ ಹಾಗೂ ಶ್ರೀಮತಿ ಶಾಕುಂತಲಾ ಭಟ್,”ಗೆಳೆಯರ ಬಳಗ ಕಾರಂತ ಪುರಸ್ಕಾರ” ಪಡೆದವರಾಗಿದ್ದಾರೆ.
ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ.
ಗೆಳೆಯರ ಬಳಗ ಕಾರಂತ ಪುರಸ್ಕಾರ-2026 ನ್ನು ಅಕ್ಟೋ ಬರ್ ತಿಂಗಳ 11ರ ಆದಿತ್ಯವಾರ ಸಂಜೆ ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು ಬಳಗದ ಅಧ್ಯಕ್ಷ ಶ್ರೀ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.
