ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವತಿಯಿಂದ “ವಿಶುವಲ್ ಕಮ್ಯುನಿಕೇಶನ್–ಥ್ರೂ ದ ಲೆನ್ಸ್ ಆಫ್ ಮೊಬೈಲ್ ಫೋಟೋಗ್ರಫಿ” ವಿಷಯದ ಕುರಿತು ವಿಶೇಷ ಕಾರ್ಯಕ್ರಮವು ಮಂಗಳವಾರ ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಸಭಾಂಗಣದಲ್ಲಿ ನಡೆಯಿತು.
ಉದಯವಾಣಿಯ ಹಿರಿಯ ಸುದ್ದಿ ಛಾಯಾಗ್ರಾಹಕ ಹಾಗೂ ಫೋಟೋ ಜರ್ನಲಿಸ್ಟ್ ಆಸ್ಟ್ರೋ ಮೋಹನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮೊಬೈಲ್ ಛಾಯಾಗ್ರಹಣದ ಮೂಲಕ ಪರಿಣಾಮಕಾರಿ ದೃಶ್ಯ ಸಂವಹನ ನಡೆಸುವ ವಿಧಾನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಛಾಯಾಚಿತ್ರದ ಮಹತ್ವ, ಸೂಕ್ತ ದೃಷ್ಟಿಕೋನ, ಬೆಳಕು ಮತ್ತು ಸಂಯೋಜನೆಯ ಕುರಿತು ಮಾತನಾಡಿದ ಅವರು, ಚಿತ್ರಗಳ ಮೂಲಕ ಸುದ್ದಿಯನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡುವ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್ ಉಪಸ್ಥಿತರಿದ್ದರು. ಪ್ರಥಮ ಬಿ.ಬಿ.ಎ. ವಿದ್ಯಾರ್ಥಿ ವಿಹಾನ್ ಸ್ವಾಗತಿಸಿದರು. ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಭೂಮಿಕಾ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಬಿ.ಬಿ.ಎ. ವಿದ್ಯಾರ್ಥಿನಿ ಕಮಲಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು.
