BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಶಿಕ್ಷಣ

ವಿದ್ಯಾರ್ಥಿಗಳೊಂದಿಗೆ ಮಾನಸಿಕ ಆರೋಗ್ಯದ ಕುರಿತು ಸಂವಾದ ನಡೆಸಿದ ಬೈಕರ್ ಸೆಹರ್ ಹಶ್ಮಿ

ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನದ ಅಂಗವಾಗಿ ದೇಶಾದ್ಯಂತ ಬೈಕ್ ಸಂಚಾರ ಮಾಡುತ್ತಿರುವ ದೆಹಲಿ ಮೂಲದ ಸೆಹರ್ ಹಶ್ಮಿ ಇಲ್ಲಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡಿನಲ್ಲಿ ಮಂಗಳವಾರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

‘ದಿಗಂತದಾಚೆಗೆ: ಸ್ಥೈರ್ಯಕ್ಕಾಗಿ ಒಂದು ಸವಾರಿ’ ಎಂಬ ರಾಷ್ಟ್ರೀಯ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ ಹಮ್ಮಿಕೊಂಡು ತಮ್ಮ ವೈಯಕ್ತಿಕ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. 

ಮಾನಸಿಕ ಆರೋಗ್ಯದ ಸಮಸ್ಯೆಗಳ ಕುರಿತು ಮುಕ್ತವಾಗಿ ಮಾತನಾಡುವ ಮೂಲಕ ಕಳಂಕವನ್ನು ದೂರಗೊಳಿಸಬೇಕು ಹಾಗೂ ಅಗತ್ಯವಿದ್ದಾಗ ವೃತ್ತಿಪರ ನೆರವು ಪಡೆಯಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರೆಡ್‌ಕ್ರಾಸ್ ಘಟಕದ ಜಿಲ್ಲಾ ಕಾರ್ಯದರ್ಶಿ ಗಣನಾಥ ಶೆಟ್ಟಿ ಯೆಕ್ಕಾರು ಭಾರತದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಯನ್ನು ಅನೇಕರು ಮೌನವಾಗಿ ಎದುರಿಸುತ್ತಿದ್ದಾರೆ. ದೈಹಿಕ, ಮಾನಸಿಕ ಹಾಗೂ ಸಾಂಸ್ಕೃತಿಕ ಆರೋಗ್ಯದ ಕಾಳಜಿ ವಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ ಮಾತನಾಡಿ, ವೈಯಕ್ತಿಕ ಅನುಭವಗಳ ಮೂಲಕ ಯುವಜನರನ್ನು ತಲುಪಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುತ್ತಿರುವ ಸೆಹರ್ ಹಶ್ಮಿ ಅವರು ಯುವಜನರಿಗೆ ಮಾದರಿಯಾಗಿದ್ದಾರೆ ಎಂದರು.

ಆ. 20ರಂದು ದೆಹಲಿಯಲ್ಲಿ ನಟಿ ಶರ್ಮಿಳಾ ಟಾಗೋರ್ ಅವರಿಂದ ಚಾಲನೆ ಪಡೆದಿರುವ ಅಭಿಯಾನವು ದೆಹಲಿ–ಕನ್ಯಾಕುಮಾರಿ–ದೆಹಲಿ ಮಾರ್ಗದಲ್ಲಿ 50 ನಗರಗಳಲ್ಲಿ 100 ಮಾನಸಿಕ ಆರೋಗ್ಯ ಕಾರ್ಯಾಗಾರಗಳನ್ನು ನಡೆಸುವ ಉದ್ದೇಶ ಹೊಂದಿದೆ.

ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಭಟ್ ಹಾಗೂ ಅಭಿಯಾನದ ತಂಡದ ಸದಸ್ಯರಾದ ಫರ್ಹತ್ ಖಾನ್, ಸನ್ನಿ ಲೋಚವ್ ಮತ್ತು ರಾಕೇಶ್ ಸೈನಿ ಉಪಸ್ಥಿತರಿದ್ದರು. 

ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ರಮ್ಯಾ ವಿ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ರೆಡ್ ಕ್ರಾಸ್ ನ ಯೋಜನಾಧಿಕಾರಿ ಮುಖ್ಯಸ್ಥೆ ಕವಿತಾ ಸ್ವಾಗತಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!