BREAKING
ಸುದ್ದಿ

ತುಳು ಭಾಷಾ ಮಾನ್ಯತೆ ಸಂಭ್ರಮಕ್ಕೆ ‘ತುಳುವೆರೆ ದಿಬ್ಬಣ’

ಉಡುಪಿ: ತುಳು ಭಾಷೆಗೆ ಕರ್ನಾಟಕ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ದೊರೆತಿರುವ ಹಿನ್ನೆಲೆಯಲ್ಲಿ ತುಳುಕೂಟ ಉಡುಪಿ (ರಿ.) ವತಿಯಿಂದ ಅ.4ರಂದು ಉಡುಪಿಯಲ್ಲಿ ‘ವಿಶೇಷ ತುಳುವೆರೆ ದಿಬ್ಬಣ’ ಹಾಗೂ ಗೌಜಿ-ಮಿನದನ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಸಂಜೆ 3 ಗಂಟೆಗೆ ಕುಂಜಿಬೆಟ್ಟು ರಿಕ್ಷಾ ನಿಲ್ದಾಣದಿಂದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದವರೆಗೆ ತುಳುಕೂಟದ ಸದಸ್ಯರು ಹಾಗೂ ವಿವಿಧ ತುಳು ಸಂಘಟನೆಗಳ ಸಹಯೋಗದೊಂದಿಗೆ ತುಳುವೆರೆ ದಿಬ್ಬಣ ನಡೆಯಲಿದೆ. ಬಳಿಕ ಸಂಜೆ 4 ಗಂಟೆಗೆ ಐವೈಸಿ ಸಭಾಂಗಣದಲ್ಲಿ ತುಳು ಭಾಷಾ ಮಾನ್ಯತೆ ಸಂಭ್ರಮ ಹಾಗೂ ವಿಶ್ವಪ್ರಭಾ ಪ್ರಯೋಜಿತ ಎಸ್. ಯು. ಪಣಿಯಾಡಿ ನೆನಪಿನ ತುಳು ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ತುಳು ಭಾಷೆಗೆ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಉಡುಪಿ ತುಳುಕೂಟವು ಈ ವಿಶೇಷ ಕಾರ್ಯಕ್ರಮದ ಮೂಲಕ ತುಳುವರ ಸಂಭ್ರಮವನ್ನು ವ್ಯಕ್ತಪಡಿಸಲು ಮುಂದಾಗಿದೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ಪ್ರಕ್ರಿಯೆಯಲ್ಲಿ ಹೋರಾಟ ನಡೆಸಿದ ಅಖಿಲ ಭಾರತ ತುಳು ಒಕ್ಕೂಟ, ಮಂಗಳೂರು ಇದರ ಅಧ್ಯಕ್ಷ ಎ.ಸಿ. ಭಂಡಾರಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟ ಉಡುಪಿ (ರಿ.) ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ವಹಿಸಲಿದ್ದಾರೆ. ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಕೆ. ರಘುಪತಿ ಭಟ್ ಹಾಗೂ ಉದ್ಯಮಿ ಪ್ರಸಾದ್‌ರಾಜ್ ಕಾಂಚನ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತುಳು ವಿಷಯದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.


 ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ

ತುಳುಕೂಟ ಉಡುಪಿ (ರಿ.) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಶ್ವಪ್ರಭಾ ಪ್ರಾಯೋಜಿತ 31ನೇ ವರ್ಷದ ತುಳುಚಳುವಳಿಯ ನೇತಾರ ದಿ. ಎಸ್. ಯು.ಪಣಿಯಾಡಿ ನೆನಪಿನ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭವೂ ಅ.4ರಂದು ಸಂಜೆ 4 ಗಂಟೆಗೆ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ.

ಉಡುಪಿ ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ತುಳು ಒಕ್ಕೂಟದ ಗೌರವಾಧ್ಯಕ್ಷ ಬರೋಡಾ ಶಶಿಧರ ಶೆಟ್ಟಿ, ತುಳು ಸಂಘ ಬರೋಡಾದ ಗೌರವಾಧ್ಯಕ್ಷ ದಯಾನಂದ ಬೋಂಟ್ರ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ, ಸಮಾಜ ಸೇವಕ ಹಾಗೂ ಪಣಿಯಾಡಿ ಕಾದಂಬರಿ ಪ್ರಶಸ್ತಿಯ ಪ್ರಯೋಜಕ ಉಡುಪಿ ವಿಶ್ವನಾಥ ಶೆಣೈ ಹಾಗೂ ಯುವ ಉದ್ಯಮಿ, ಉಡುಪಿ ಹೃದಯಂ ಫೌಂಡೇಶನ್‌ನ ಪ್ರವರ್ತಕ ಸುಭಾಷ್ ಸಾಲ್ಯಾನ್ ನೆಲ್ಲಿಕಟ್ಟಿ ಭಾಗವಹಿಸಲಿದ್ದಾರೆ.

2025ನೇ ಸಾಲಿನ ಪಣಿಯಾಡಿ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾದ ‘ದಧೂಟಿ ಬನ’ ಕಾದಂಬರಿ ಆಯ್ಕೆಯಾಗಿದೆ. ಕಾದಂಬರಿಯ ಲೇಖಕಿ ಪುತ್ತೂರಿನ ಉಪತಹಶೀಲ್ದಾರ್ ಸುಲೋಚನಾ ಪಿ.ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. 10ಸಾವಿರ ನಗದು ಸಮೇತ ಪ್ರಶಸ್ತಿ ಪತ್ರ ನೀಡಲಾಗುವುದು. ಕೃತಿಯ ಪರಿಚಯವನ್ನು ಸಾಹಿತಿ ವಾಸಂತಿ ಅಂಬಪಾಡಿ ಮಾಡಲಿದ್ದಾರೆ. *ಪತ್ರಿಕಾ ಗೋಷ್ಠಿ ಯಲ್ಲಿ ಭಾಗವಹಿಸುವವರು: ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ,ಉಪಾಧ್ಯಕ್ಷರಾದ ಭುವನ ಪ್ರಸಾದ್ ಹೆಗ್ಡೆ,ಡಾ. ವಿ. ಕೆ. ಯಾದವ್, ಕಾರ್ಯ ದರ್ಶಿ ಗಂಗಾಧರ್ ಕಿದಿಯೂರು, ಕೋಶಾಧಿಕಾರಿ ಎಂ. ಜಿ. ಚೈತನ್ಯ, ಪಣಿಯಾಡಿ ಪ್ರಶಸ್ತಿ ಸಂಚಾಲಕ ಪ್ರಕಾಶ್ ಸುವರ್ಣ ಕಟಪಾಡಿ, ತುಳುವೆರೆ ದಿಬ್ಬಣ ಸಂಚಾಲಕ ದಿವಾಕರ್ ಸನಿಲ್, ಮಾಧ್ಯಮ ಸಂಚಾ ಲಕಿ ಯಶೋಧ ಕೇಶವ್, ನಾಟಕ ಪರ್ಬ ಸಂಚಾಲಕ ಬಿ. ಪ್ರಭಾಕರ್ ಭಂಡಾರಿ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!