ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ 'ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ' ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಬಿ.ಎಂ. ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಡಾ. ಬೈರಮಂಗಲ ರಾಮೇಗೌಡ (ಸಮಗ್ರ ಸಾಹಿತ್ಯ), ಉಡುಪಿಯ ಹಿರಿಯ ಸಾಹಿತಿ ಇಂದಿರಾ ಹಾಲಂಬಿ (ಮಕ್ಕಳ ಸಾಹಿತ್ಯ), ಡಿ ಆರ್ ಡಿ ಓ ಇದರ ಮುಖ್ಯ ಸಂಪರ್ಕ ಅಧಿಕಾರಿಯಾಗಿದ್ದ ಮೈಸೂರಿನ ಜಯಪ್ರಕಾಶ್ ಪುತ್ತೂರು (ಅನುವಾದ ಸಾಹಿತ್ಯ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನವೆಂಬರ್ 8ರಂದು ನಡೆಯುವ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕ, ನಗದು 5,000 ದೊಂದಿಗೆ 'ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026' ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿಯಾದ ಸಂಧ್ಯಾ ಶೆಣೈ ಉಡುಪಿ ತಿಳಿಸಿರುತ್ತಾರೆ.
