ಮಣಿಪಾಲದ ಅನಂತನಗರದ ಮೂರನೇ ಕ್ರಾಸ್ನಲ್ಲಿರುವ ಸರ್ಕಾರಿ ಜಾಗದಲ್ಲಿ ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಖಾಲಿ ಜಾಗವನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದ್ದ ವೇಳೆ ಭಾಗಶಃ ತಲೆಬುರುಡೆ ಹಾಗೂ ಕೈಗಳ ಮೂಳೆಗಳು ಪತ್ತೆಯಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಪತ್ತೆಯಾದ ಮೂಳೆಗಳ ಅವಶೇಷಗಳನ್ನು ಸಂಗ್ರಹಿಸಿ ಮುಂದಿನ ತನಿಖೆಗಾಗಿ ಮಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
