BREAKING
ಕಲಾಸಂಸ್ಕೃತಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಕಾರ್ಯಕ್ರಮ

ಉಡುಪಿ:- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ನೆನಪಿಗಾಗಿ ರಾಜ್ಯದ ಪ್ರತಿಯೊಂದು ಕಡೆಗಳಲ್ಲಿ ವೃತ್ತಕ್ಕೆ ರಾಯಣ್ಣ ಹೆಸರಿಡಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಉಡುಪಿ ಯಕ್ಷಗಾನ ಕಲಾ ರಂಗದ ಐ ವೈ ಸಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವತಿಯಿಂದ ಆದಿತ್ಯವಾರ ಆಯೋಜಿಸಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಂಗಕರ್ಮಿ ಸಂಘಟಕ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ ಮಾಡಿದರು.

ಸಂಗೊಳ್ಳಿ ರಾಯಣ್ಣ ಅವರನ್ನು ಗಲ್ಲಿಗೇರಿಸಿದ ಜಾಗ ದೈವಿಕ ಶಕ್ತಿ ಹೊಂದಿದೆ ಅವರು ವೀರಮರಣ ಹೊಂದಿದ ಶತಮಾನಗಳ ಬಳಿಕ ಅಗಸ್ಟ್ 15ರಂದು ದೇಶ ಸ್ವಾತಂತ್ರ್ಯವಾಯಿತು ಇದು ರಾಯಣ್ಣನವರ ಜನ್ಮದಿನ ಅದೇ ರೀತಿ ಅವರು ವೀರ ಮರಣವನ್ನು ಅಪ್ಪಿದ ಜನವರಿ 26 ದೇಶದ ಗಣರಾಜ್ಯೋತ್ಸವ ಇದು ರಾಯಣ್ಣ ಅವರಲ್ಲಿದ್ದ ದೈವಿಕ ಶಕ್ತಿಯ ಪ್ರತೀಕವಾಗಿದೆ ಎಂದರು.

ಸಂಘಟನೆ ಜಿಲ್ಲಾಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ರಾಯಣ್ಣ ಅವರು ಬದುಕಿದ್ದು ಕೇವಲ 35 ವರ್ಷವಾದರೂ ಅವರು ಮಾಡಿದ ಸಾಧನೆ ಎಲ್ಲರಿಗೂ ಮಾದರಿ ಇಂತಹ ಅಪ್ರತಿಮ ವೀರನ ಹೆಸರಿನಲ್ಲಿ ನೀಡುವ ಪ್ರಶಸ್ತಿ ಅತ್ಯಂತ ಶ್ರೇಷ್ಠವಾಗಿದೆ ಎಂದರು.

ಉರಗತಜ್ಞ ಗುರುರಾಜ್ ಸನಿಲ್ ಅಭಿನಂದನಾ ಮಾತುಗಳಾಡಿದರು. ಉಡುಪಿ ಗಾಂಧಿ ಆಸ್ಪತ್ರೆ ಸಂಸ್ಥಾಪಕ ಡಾ. ಹರೀಶ್ಚಂದ್ರ ಶುಭ ಹಾರೈಸಿದರು. ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ್ ಎಕ್ಕಾರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಯು ವಿಶ್ವನಾಥ್ ಶಣೈ, ಜಿಲ್ಲಾ ಸಂಘಟನೆ ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಉಪಾಧ್ಯಕ್ಷ ಲಕ್ಷ್ಮಣ್ ಕೊಲ್ಕರ್, ಗೌರವಾಧ್ಯಕ್ಷ ಜನಾರ್ದನ್ ಕೊಡವೂರು ಮುಂತಾದವರು ಉಪಸ್ಥಿತರಿದ್ದರು. ರಂಜನಿ ವಸಂತ್ ದೀಪ ಕರ್ಕಿ ಪ್ರಾರ್ಥಿಸಿದರು. ರಾಜೇಶ್ ಭಟ್ ಪಣಿಯಾಡಿ ಸ್ವಾಗತಿಸಿದರು ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು. ಸತೀಶ್ ಕೊಡವೂರು ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಗಾಯಕ ರಾಜೇಶ್ ಶಾನುಭಾಗ್ ಅವರಿಂದ ಗಾಯನ ನಡೆಯಿತು.

ರಾಯಣ್ಣ ಮೂರ್ತಿಗೆ ಕ್ಷೀರಭಿಷೇಕ ಮತ್ತು ಪ್ರಶಸ್ತಿ ಪುರಸ್ಕೃತರ ಪರಿಚಯ ಸಾಕ್ಷಾ ಚಿತ್ರ ವಿಶೇಷವಾಗಿತ್ತು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!