ಉಡುಪಿ: ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಬೆಂಗಳೂರು ಇದರ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ರವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯ ಅಧ್ಯಕ್ಷರಾದ ಡಾ. ಎಸ್ ಬಾಲಾಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಸಿ ಪದ ಪ್ರಧಾನ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
