ನಮ್ಮ ಕರ್ನಾಟಕ ಸೇನೆಯ ರಾಜ್ಯಮಟ್ಟದ ಸಭೆಯು ಭಾನುವಾರ ಬೆಂಗಳೂರಿನ ಗಾಂಧಿನಗರದಲ್ಲಿರುವ ಸ್ಯಾಂಕ್ಟಮ್ ಹೋಟೆಲ್‌ನಲ್ಲಿ ನಡೆಯಿತು. ಈ ಸಭೆಯು ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಎಂ. ಬಸವರಾಜ್ ಪಡುಕೋಟೆ ಅವರ ಜನ್ಮದಿನದ ವಿಶೇಷ ಸಂದರ್ಭದಲ್ಲಿ ಜರುಗಿತು.
ಈ ರಾಜ್ಯಮಟ್ಟದ ಸಭೆಯಲ್ಲಿ ಸಂಘಟನೆಯ ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರ ಸಮ್ಮುಖದಲ್ಲಿ, ನಮ್ಮ ಕರ್ನಾಟಕ ಸೇನೆಯ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಜಯ್ ಪೂಜಾರಿ ಅವರಿಗೆ ಹೆಚ್ಚುವರಿಯಾಗಿ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿ ಆಯ್ಕೆ ಮಾಡಲಾಯಿತು.
ಸುಜಯ್ ಪೂಜಾರಿ ಅವರು ಇನ್ನು ಮುಂದೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕಾರವಾರ ಜಿಲ್ಲೆಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಂಘಟನೆಯ ಬಲವರ್ಧನೆ, ಹೊಸ ಪದಾಧಿಕಾರಿಗಳ ನೇಮಕ, ಸದಸ್ಯತ್ವ ಅಭಿಯಾನ ಹಾಗೂ ಕನ್ನಡ ನಾಡು, ನುಡಿ, ನೆಲ, ಜಲದ ರಕ್ಷಣೆಯ ನಿಟ್ಟಿನಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಟ್ಟ ನನ್ನ ಆತ್ಮೀಯ ರಾಜ್ಯಾಧ್ಯಕ್ಷರಾದ ಶ್ರೀ ಎಂ. ಬಸವರಾಜ್ ಪಡುಕೋಟೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಧನ್ಯವಾದ
