BREAKING
ಸುದ್ದಿ

ಕುಂದಾಪುರ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು ಬಾಲಕಿಯರು ಕಾಲು ಜಾರಿ ನೀರಿಗೆ ಬಿದ್ದು ಸಾವು!

ಕುಂದಾಪುರ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು ಬಾಲಕಿಯರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲ್ಲೂಕಿನ ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಮೃತರನ್ನು ಮುಳ್ಳಿಕಟ್ಟೆಯಲ್ಲಿ ಜೋಪಡಿಯಲ್ಲಿ ವಾಸವಾಗಿದ್ದ, ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಮುದ್ದಿನಕೊಪ್ಪದ ಚಂದ್ರು ಬಸವರಾಜ ವೇಷಗಾರ ಮತ್ತು ಮಂಜಕಾಳು ದಂಪತಿಯ ಪುತ್ರಿ ಸುನೀತಾ (13) ಹಾಗೂ ಅವರ ಚಿಕ್ಕಪ್ಪ ದಿ. ಮಂಜುನಾಥ ಮತ್ತು ಶಾರದಾ ದಂಪತಿಯ ಪುತ್ರಿ ವೈಶಾಲಿ (13) ಎಂದು ಗುರುತಿಸಲಾಗಿದೆ. ಇಬ್ಬರೂ ಹೊಸಾಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಭಾನುವಾರ ಸಂಜೆ ಸುಮಾರು 4 ಗಂಟೆಗೆ ಜೋಪಡಿಯ ಐವರು ಮಕ್ಕಳು ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆಯಲ್ಲಿರುವ ಕಡುಬಿನ ಕೆರೆಗೆ ಬಟ್ಟೆ ತೊಳೆಯಲು ತೆರಳಿದ್ದರು. ಈ ವೇಳೆ ಕೆರೆಯ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಸುನೀತಾ ಮತ್ತು ವೈಶಾಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಘಟನೆಯ ಮಾಹಿತಿ ತಿಳಿದು ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ತಂಡ, ಟೀಮ್ ಎಚ್‌ಐ ತುರ್ತು ಸ್ಪಂದನ ತಂಡ, ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮೇಲಕ್ಕೆತ್ತಲು ಸಹಕರಿಸಿದರು.

ಗಂಗೊಳ್ಳಿಯ ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ಆಂಬುಲೆನ್ಸ್ ಮೂಲಕ ಮೃತದೇಹಗಳನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಯಿತು. ಗಂಗೊಳ್ಳಿ ಠಾಣೆಯ ಪಿಎಸ್‌ಐ ಪವನ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!