BREAKING
ಸುದ್ದಿ

ಅಜ್ಜರಕಾಡು ಈಜುಕೊಳದಲ್ಲಿ ಜಿಲ್ಲಾಮಟ್ಟದ ಈಜು ಸ್ಪರ್ಧೆ

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಕೂಡ ಹೆಚ್ಚುತ್ತದೆ. ಇತ್ತೀಚಿಗೆ ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಅವಕಾಶಗಳು ತೆರೆದುಕೊಳ್ಳುತ್ತಿರುವುದರಿಂದ ಅಧ್ಯಯನದ ಜೊತೆ ಜೊತೆಯಲ್ಲಿಯೇ ಕ್ರೀಡಾ ವಿಭಾಗದಲ್ಲೂ ಕೂಡ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಬೇಕು, ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. 

ಅವರು ಉಡುಪಿಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.‌ 

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಸಾಫಲ್ಯ ಟ್ರಸ್ಟ್ ನ ಅಧ್ಯಕ್ಷೆ ಶ್ರೀಮತಿ ರಂಜನಾ ಶೆಟ್ಟಿ, ಪ್ರವರ್ತಕಿ ಶ್ರೀಮತಿ ನಿರುಪಮಾ ಪ್ರಸಾದ್, ಎಸ್ ಡಿ ಎಂ ಸಿ ಗೌರವಾಧ್ಯಕ್ಷೆ ತಾರಾದೇವಿ, ಲತಾ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವೀಂದ್ರ ನಾಯಕ್, ನಿತ್ಯಾನಂದ, ಸತ್ಯನಾರಾಯಣ ಜಿ, ವಿಜಯಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ವಿಜಯಕುಮಾರ್ ಶೆಟ್ಟಿ ಕಿರಣ್ ಕುಮಾರ್ ಶೆಟ್ಟಿ ವರದರಾಜ ನಾಯಕ್ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಲೋಕೇಶ್ ಮತ್ತು ದಾನಿ ಹಾಗೂ ಶಿಕ್ಷಣ ಅಭಿಮಾನಿ ಉಡುಪಿ ಬ್ಲೂಟೂತ್ ಸಂಸ್ಥೆಯ ಡಾ. ರಾಧಿಕಾ ಸೋಮಯಾಜಿಯವರನ್ನು ಸನ್ಮಾನಿಸಲಾಯಿತು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ ವಸಂತ ಜೋಗಿ ಧನ್ಯವಾದಗೈದರು


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!