ಡಾ. ವ್ಯಾಸರಾವ್ ನಿಂಜೂರು (86) ಅವರು ನವೆಂಬರ್ 3, 2026ರಂದು ಮುಂಬೈನಲ್ಲಿ ನಿಧನರಾದರು. ಉಡುಪಿ ಜಿಲ್ಲೆಯ ತೆಂಕನಿಡಿಯೂರಿನ ಮೂಲದವರಾದ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಗುರುತನ್ನು ಮೂಡಿಸಿರುವ ಹಿರಿಯ ಸಾಹಿತಿ, ಸಂಶೋಧಕ ಹಾಗೂ ಚಿಂತಕರಾಗಿದ್ದರು. ಅವರು 2006 ರಲ್ಲಿ ಇನ್ನದಲ್ಲಿ ನಡೆದ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ (BARC) ವಿಜ್ಞಾನಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು, ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದರೂ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಕಥೆ, ಲೇಖನ ಹಾಗೂ ಸಾಹಿತ್ಯ ಸಂಶೋಧನೆಯ ಮೂಲಕ ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
